ಲಿವಿಂಗ್ ಟೂ ಗೆದರ್ ನಲ್ಲಿದ್ದ ಪ್ರೀಯತಮೆಯ ಕತ್ತು ಕೊಯ್ದು ಕೊಲೆ ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಲಬುರಗಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಲಬುರಗಿ ನಗರದ ನೂರಾನಿ ಮೊಹಲ್ಲಾ ಬಡಾವಣೆಯಲ್ಲಿ ನಡೆದಿದ್ದ ಶಹನಾ ಬೇಗಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಸೀಂ ಅಕ್ರಂನನ್ನು ರೋಜಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಿಯತಮೆ ಶಹನಾಳು ಆರೋಪಿ ವಸೀಂ ಅಕ್ರಮ್ ಗೆ ಹಣ ಕೊಡದೆ ಇದ್ದಾಗ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದನು ಎಂದು ಪೊಲೀಸ್ ಮೂಲಗಳು ತಿಳಿಸಿವೆ.